ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ದಾವಣಗೆರೆ ನಗರದ ಪಿ.ಬಿ.ರಸ್ತೆ, ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಮಾ.11 ಮತ್ತು 12 ರಂದು ರೈತರಿಗೆ ಕುರಿ, ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಿದೆ.
READ | ಲಿಡ್ಕರ್ ಚರ್ಮದ ಉತ್ಪನ್ನಗಳ ಮಾರಾಟದ ಮೇಲೆ ರಿಯಾಯಿತಿ, ಶಿವಮೊಗ್ಗದಲ್ಲಿ ನಡೆಯಲಿದೆ ಡಾಕ್ ಅದಾಲತ್
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು ಎಂದು ದಾವಣಗೆರೆ.ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ. ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಇವರ ದೂರವಾಣಿ ಸಂಖ್ಯೆ: 08192-233787 ಗೆ ಸಂಪರ್ಕಿಸುವುದು.
ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
SHIMOGA: ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಯೋಜನೆಗಳಾದ ಮಧ್ಯಮ ವರ್ಗದ ಆರ್.ಎ.ಎಸ್. ಘಟಕ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ ಮಾಡಿಕೊಂಡು ಮೀನುಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ, ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ ಮತ್ತು ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪ.ಜಾ./ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾ. 31 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಕ್ಸಸ್ ಸ್ಟೋರಿ | ಉದ್ಯೋಗ ಕಸಿದುಕೊಂಡ ಲಾಕ್ಡೌನ್, ಬದುಕು ನೀಡಿದ ‘ಕುರಿ ಸಾಕಾಣಿಕೆ’