Lokayukta trap | ಲೋಕಾಯುಕ್ತರ ಬಲೆಗೆ ಕಂದಾಯ ನಿರೀಕ್ಷಕ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್

Bribe lancha

 

 

ಸುದ್ದಿ ಕಣಜ.ಕಾಂ ಸೊರಬ
SORAB: ಇ-ಸ್ವತ್ತು ಮಾಡಿಸಲು ಲಂಚ‌ ಕೇಳಿದ್ದ ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ್ ಬುಧವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ. ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಲಾಗಿದೆ.

READ |  ಎಂಎಡಿಬಿ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ್ ಗೌಡ ಅಧಿಕಾರ ಸ್ವೀಕಾರ

ಪ್ರತಿಭಾ ಹಳೇ ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಇರುವ ಖಾಲಿ ನಿವೇಶನದ ಇ-ಸ್ವತ್ತು ಮಾಡಿಸಲು ಕಂದಾಯ ನಿರೀಕ್ಷಕ ವಿನಾಯಕರವರನ್ನು ಭೇಟಿ ಮಾಡಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭ ಕಂದಾಯ ನಿರೀಕ್ಷಕ ₹40000 ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು. ಅರ್ಜಿದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಲಾಯಿತು.
ಪೊಲೀಸ್ ನಿರೀಕ್ಷಕ ಪ್ರಕಾಶ್ ಅವರ ತಂಡವು ಈತನನ್ನು ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಹಿಡಿದು ಹಣವನ್ನು ಜಪ್ತಿ ಮಾಡಿ, ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಿರುತ್ತಾರೆ.
ಕಾರ್ಯಾಚರಣೆಯನ್ನು ಪೊಲೀಸ್ ಉಪಾಧೀಕ್ಷಕ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆಸಲಾಗಿದ್ದು, ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಪೊಲೀಸ್ ನಿರೀಕ್ಷಕ ಎಚ್.ಎಸ್. ಸುರೇಶ್, ಸಿಬ್ಬಂದಿ ಮಹಂತೇಶ್, ಸುರೇಂದ್ರ, ಯೋಗೀಶ್, ಬಿ.ಟಿ. ಚನ್ನೇಶ, ಪ್ರಶಾಂತ್‍ ಕುಮಾರ್, ಅರುಣ್‍ ಕುಮಾರ್, ದೇವರಾಜ, ರಘುನಾಯ್ಕ, ಕೆ.ಸಿ. ಜಯಂತ, ವಿ. ಗೋಪಿ, ಪ್ರದೀಪ್ ಕುಮಾರ್, ಬಿ.ಕೆ. ಗಂಗಾಧರ ಕರ್ತವ್ಯ ನಿರ್ವಹಿಸಿದ್ದಾರೆ.

error: Content is protected !!