ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ರಾಜ್ಯದ ಎಲ್ಲ ಎಸ್ಕಾಂಗಳ RAPDRP- ನಗರ ಪ್ರದೇಶಗಳಾದ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರುಗಳಲ್ಲಿ ಗ್ರಾಹಕರಿಗೆ ವಿದ್ಯುತ್ ಬಿಲ್ಲುಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಇತ್ಯಾದಿ ಸೇವೆಗಳು ಮಾ. 10 ರಿಂದ 19 ರವರೆಗೆ 10 ದಿನಗಳ ಕಾಲ ಲಭ್ಯವಿರುವುದಿಲ್ಲ.
ಉನ್ನತೀಕರಿಸಿದ ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಸೇವಾ ಸ್ಥಗಿತ ಕಾಲದಲ್ಲಿ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Yuva nidhi | ಯುವನಿಧಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸೂಚನೆ, ಹೀಗೆ ಮಾಡದಿದ್ದರೆ ಜಮಾ ಆಗಲ್ಲ ಹಣ