ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಚುನಾವಣಾ ಆಯೋಗವು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಸಲಿದ್ದು, ಒಂದೇ ದಿನ ಇಡೀ ದೇಶದಲ್ಲಿ ಒಂದೇ ದಿನ ಮತ ಎಣಿಕೆ ನಡೆಯಲಿದ್ದು, ಚುನಾವಣಾ ಫಲಿತಾಂಶ ಹೊರಬೀಳಲಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 26 ರಂದು 14 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ ಮೇ 7 ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ್ದು, 543 ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
READ | ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ, ಕರ್ನಾಟಕದಲ್ಲಿ ಮತದಾನ, ಫಲಿತಾಂಶ ಯಾವಾಗ?
ಯಾವ ಹಂತದಲ್ಲಿ ಯಾವ ಕ್ಷೇತ್ರಗಳ ಚುನಾವಣೆ?
- ಮೊದಲ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಮಾರ್ಚ್ 28 ರಂದು ಪ್ರಕಟಗೊಳ್ಳಲಿದೆ.
ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 5 ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿರುತ್ತದೆ.
ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದೆ.
ಮೊದಲ ಹಂತದಲ್ಲಿ ಉಡುಪಿ- ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್ಸಿ) ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ. - ಎರಡನೇ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಏಪ್ರಿಲ್ 12 ರಂದು ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿರುತ್ತದೆ. ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದ್ದು, ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್ಸಿ), ಗುಲ್ಬರ್ಗಾ (ಎಸ್ಸಿ), ರಾಯಚೂರು (ಎಸ್ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.