Loka sabha election | ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ, ಕರ್ನಾಟಕದಲ್ಲಿ ಮತದಾನ, ಫಲಿತಾಂಶ ಯಾವಾಗ?

Rajiv Kumar ECI

 

 

ಸುದ್ದಿ‌ ಕಣಜ.ಕಾಂ ನವದೆಹಲಿ
NEW DELHI: ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಶನಿವಾರ ಚುನಾವಣೆ ಆಯೋಗವು ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಕರ್ನಾಟಕದ್ದು ಎರಡನೇ ಹಂತದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿರುವ 28 ಲೋಕಸಭೆ ಕ್ಷೇತ್ರಗಳದ್ದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತ ಏಪ್ರಿಲ್ 26 ಹಾಗೂ ಮೂರನೇ ಹಂತ ಮೇ 7ರಂದು ಮತದಾನ ಪ್ರಕ್ರಿಯೆ ನಡೆಯಲಿದೆ.
ಮಾಧ್ಯಮಗೋಷ್ಠಿಯಲ್ಲಿ ಚುನಾವಣಾ ಆಯೋಗದ ನೂತನ ಸದಸ್ಯರಾದ ಜ್ಞಾನೇಶ್‌ ಕುಮಾರ್, ಸುಖಬೀರ್ ಸಿಂಗ್ ಇದ್ದಾರೆ.
ಲೋಕಸಭೆ ಚುನಾವಣೆ ಪ್ರಮುಖ ದಿನಾಂಕ
* ಏಪ್ರಿಲ್‌ 26ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
* ಮೇ 7ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
* ಜೂನ್ 4ರಂದು‌ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

error: Content is protected !!