ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 35 ವರ್ಷದ ವ್ಯಕ್ತಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
2021ನೇ ಸಾಲಿನಲ್ಲಿ ಸೊರಬ ತಾಲ್ಲೂಕಿನ ವ್ಯಕ್ತಿಯು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಬಗ್ಗೆ ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
READ | ಲೋಕಾಯುಕ್ತರ ಬಲೆಗೆ ಕಂದಾಯ ನಿರೀಕ್ಷಕ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್
ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ ಎಲ್.ರಾಜಶೇಖರ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಶಿವಮೊಗ್ಗದ FTSC-1 ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶರಾದ ಲತಾ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹60,000 ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 4 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿದ್ದು ಮತ್ತು ದಂಡದ ಮೊತ್ತದಲ್ಲಿ ₹50,000 ಹಾಗೂ ಸರ್ಕಾರದಿಂದ ₹4,00,000 ಸೇರಿ ಒಟ್ಟು ₹4,50,000 ನೊಂದ ಬಾಲಕಿಗೆ ಪರಿಹಾರವಾಗಿ ನೀಡಲು ಆದೇಶಿಸಿರುತ್ತಾರೆ. ವಿಶೇಷ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.