Weather Report | ಎಚ್ಚರ, ಇನ್ನೂ ಐದು ದಿನ ಭೀಕರ ಬಿಸಿಲು, ಹವಾಮಾನ ಇಲಾಖೆ ಕಟ್ಟೆಚ್ಚರ

summer

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಈಗಾಗಲೇ ಮಲೆನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದಾದ್ಯಂತ ಬಿಸಿಲಿನ ಪ್ರಖರತೆ ತೀವ್ರವಾಗಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

READ | ಶಿವಮೊಗ್ಗದ್ದು ಯಾವ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ, ಇಲ್ಲಿದೆ ಕಂಪ್ಲೀಟ್ ವೇಳಾಪಟ್ಟಿ

ಮಾ.27ರ ಬೆಳಗ್ಗೆ 8.30ರಿಂದ 28ರ ಬೆಳಗ್ಗೆವರೆಗಿನ ಗರಿಷ್ಠ ತಾಪಮಾನದ ವರದಿಯನ್ನು ಬಿಡುಗಡೆ ಮಾಡಿದ್ದು, ಶಿವಮೊಗ್ಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದೇ ರೀತಿ, ಚಿಕ್ಕಮಗಳೂರಿನಲ್ಲಿ 40.8 ಡಿ.ಸೆ., ಉತ್ತರ ಕನ್ನಡದಲ್ಲಿ 40.9 ತಾಪಮಾನ ಏರಿಕೆಯಾಗಿದೆ.
ಮುಂದಿನ ದಿನಗಳಲ್ಲಿ ಬೆಮಗಳೂರು, ತಮಕೂರು, ಬೀದರ್, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಪ್ಪಳ, ಯಾದಗಿರಿ, ಬೆಳಗಾವಿ, ಕೊಪ್ಪಳ, ವಿಜಯಪುರ, ರಾಯಚೂರು ಸೇರಿದಂತೆ ಹಲವೆಡೆ ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

error: Content is protected !!