Lokasabha election | ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿ ಎಷ್ಟು ಅಭ್ಯರ್ಥಿಗಳಿದ್ದಾರೆ, ಎಷ್ಟು ನಾಮಪತ್ರ ವಾಪಸ್?

Shivamogga Loka sabha constituency Map

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿತ್ತು. ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಸೋಮವಾರ ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.

READ | ಶಿವಮೊಗ್ಗದಲ್ಲಿ ಎಷ್ಟು ನಾಮಪತ್ರ ತಿರಸ್ಕಾರಗೊಂಡಿವೆ?

ಯಾರೆಲ್ಲ ಕಣದಲ್ಲಿ ಉಳಿದಿದ್ದಾರೆ?
ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಕೆ.ಎ.ಅರುಣ್, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್‍ಸ್ಟರ್ ಎಂಪರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಶಿವರುದ್ರಯ್ಯ ಸ್ವಾಮಿ, ಡಿ.ಎಸ್.ಈಶ್ವರಪ್ಪ, ಎಚ್. ಸುರೇಶ್ ಪೂಜಾರಿ, ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಇ.ಎಚ್.ನಾಯಕ್, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌಡ ಇವರುಗಳು ಅಂತಿಮವಾಗಿ ಕಣದಲ್ಲಿದ್ದಾರೆ.

error: Content is protected !!