Power cut | ಏ.24ರಂದು ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ‌ಕರೆಂಟ್ ಇರಲ್ಲ

POWER CUT 1

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ.24 ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ನಗರದ ಕೆಲವೆಡೆ ವಿದ್ಯುತ್ ಪೂರೈಕೆಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ (MESCOM) ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಎಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

READ | ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ ಉಚ್ಛಾಟನೆ, ಆದೇಶ ಪ್ರಕಟ, ಅದರಲ್ಲೇನಿದೆ?

ಏ.29ರಂದು‌ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

SHIMOGA: ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏ.29 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಾಯಿ ಎಕ್ಸ್ ಪೋರ್ಟ್, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್, ದಾವಣಗೆರೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

one click many news logo

error: Content is protected !!