ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: (Election Updates) ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕಾಗಿ ಮತದಾನವು ಕೊನೆಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಮತಗಟ್ಟೆಗಳ ಸುತ್ತಲೂ 200 ಮೀಟರ್ ಪರಿಮಿತಿಯಲ್ಲಿ ಮೇ 5ರ ಸಂಜೆ 6 ಗಂಟೆಯಿಂದ ಮೇ 7ರಂದು ಮತದಾನ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಸುವ ಹಿನ್ನಲೆಯಲ್ಲಿ ಹಲವು ನಿಬಂಧನೆಗಳನ್ನು ವಿಧಿಸಿ ಆದೇಶಿಸಲಾಗಿದೆ.
READ | ಮುಂದಿನ ತಿಂಗಳು ಇನ್ನಷ್ಟು ತಾಪಮಾನ ದಾಖಲು, ಏನೆಲ್ಲ ಎಚ್ಚರಿಕೆ ವಹಿಸಬೇಕು? ಆರೋಗ್ಯ ಕಾಪಾಡುವುದು ಹೇಗೆ?
ಏನೆಲ್ಲ ನಿಬಂಧನೆಗಳು ಅನ್ವಯ?
1. ನಿಷೇಧಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ ಮೇ 7ರಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ 15 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲೀ ಇತರೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ.
2. ಯಾವುದೇ ಸಂಘಟನೆಗಳು/ ರಾಜಕೀಯ ಪಕ್ಷಗಳು/ ಧಾರ್ಮಿಕ ಪಂಗಡಗಳು ಮೆರವಣಿಗೆ ಮಾಡತಕ್ಕದ್ದಲ್ಲ ಹಾಗೂ ಪ್ರತಿಭಟನೆ ನಡೆಸತಕ್ಕದಲ್ಲ.
3. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಕಲ್ಲು, ಇಟ್ಟಿಗೆ, ಚಾಕು, ಕೋಲುಗಳು, ಬಂದೂಕುಗಳು, ಲಾರಿಗಳು ಅಥವಾ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು/ ಶೇಖರಿಸುವುದನ್ನು ನಿಷೇಧಿಸಿದೆ.
4. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಬಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
5. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗೆ ಅಧಿಕಾರವಿರುತ್ತದೆ. ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದು.
6. ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗುಂಪಾಗಿ ನಿಲ್ಲುವುದನ್ನು ಹಾಗೂ ಓಡಾಡುವುದನ್ನು ನಿಷೇಧಿಸಿದೆ.
7. ಭಾಷಣ ಮಾಡುವುದು ಹಾಗೂ ಪ್ರಚೋದನಾಕಾರಿಯಾಗಿ ಮಾತನಾಡುವುದನ್ನು ನಿಷೇಧಿಸಿದೆ.
8. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ನಿಷೇಧಿಸಲಾಗಿದೆ.
9. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ, ದಹನ ಮಾಡುವುದನ್ನು ನಿರ್ಬಂಧಿಸಲಾಗಿದೆ.
10. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
11. ಮತಗಟ್ಟೆಯ ಒಳಗಡೆ ಮೊಬೈಲ್ ಫೋನ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್, ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
12. ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್/ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ.
13. ಈ ಅವಧಿಯಲ್ಲಿ ಧ್ವನಿವರ್ದಕಗಳನ್ನು ಬಳಸುವಂತಿಲ್ಲ.
14. ಕಲ್ಯಾಣ ಮಂಟಪಗಳು / ಸಮುದಾಯ ಭವನಗಳು / ಹೋಟೆಲ್ ಗಳು ಮತ್ತು ಅತಿಥಿಗೃಹಗಳನ್ನು ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವುದು.
Arecanut shell | ಅಡಿಕೆ ಬೆಳೆಗಾರರಿಗೆ ಶುಭಸುದ್ದಿ, ಶಬ್ದ ನಿರೋಧಕವಾಗಿಯೂ ಅಡಿಕೆ ಸಿಪ್ಪೆ ಬಳಕೆ!