Hit & Run | ಪಿಯುಸಿ ವಿದ್ಯಾರ್ಥಿನಿ ಸಾವು, ಇಬ್ಬರಿಗೆ ಗಾಯ

Hit and Run

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತೇವರೆಚಟ್ನಳ್ಳಿ ಸಮೀಪದ ಪೇಸ್ ಕಾಲೇಜು ಬಳಿ ಆಟೋಗೆ ಹಿಂಬದಿಯಿಂದ ಕ್ಯಾಂಟರ್ ಗುದ್ದಿದ್ದು, ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಗಾನವಿ(17) ಮೃತಪಟ್ಟಿದ್ದಾರೆ.

READ | ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಲು ಮುಂದಾದ ರೌಡಿ ಕಾಲಿಗೆ ಗುಂಡೇಟು, ಖಾಕಿ ಖಡಕ್ ವಾರ್ನಿಂಗ್

ಪೇಸ್ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದಲ್ಲಿ ಓದುತ್ತಿರುವ ಗಾನವಿ ಅಜ್ಜಿ ಮತ್ತು ತಾಯಿಯೊಂದಿಗೆ ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುವಾಗ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಈಕೆಯ ಅಜ್ಜಿ ಮತ್ತು ತಾಯಿ ಗಾಯಗೊಂಡಿದ್ದಾರೆ.
ಮಗುಚಿ ಬಿದ್ದಿದ್ದ ಆಟೋವನ್ನು ಸರಿಮಾಡಿದ ಜನರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕ್ಯಾಂಟರ್ ಅನ್ನು ಬೆನ್ನಿಟ್ಟಿಕೊಂಡು ಹೋಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!