SSLC Result | ಇಂದು ಎಸ್ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಯಾವ ಲಿಂಕ್ ನಲ್ಲಿ ಲಭ್ಯ?

sslc result

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ವಿದ್ಯಾರ್ಥಿಗಳು ಬಹು ಉತ್ಸಾಹದಿಂದ ಘಳಿಗೆಗೆ ಕ್ಷಣಗಣನೆ ಆರಂಭವಾಗಿದೆ. ಮೇ 9ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಎಸ್‌ಎಲ್‌ಸಿ ಫಲಿತಾಂಶ (SSLC Result) ಪ್ರಕಟಿಸಲಿದೆ.

READ | ಶಿವಮೊಗ್ಗ ಲೋಕಸಭೆ ಚುನಾವಣೆ ಎಲ್ಲಿ ಏನು ಎಡವಟ್ಟಾಗಿದೆ?

ಮಂಡಳಿಯು ಎಸ್ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶವನ್ನು ಇಂದು ಪ್ರಕಟಿಸಲಿದ್ದು, ರಾಜ್ಯದಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆದಿದ್ದರು. ಶಿವಮೊಗ್ಗದಲ್ಲಿ 18 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ‌ ಹಾಜರಾಗಿದ್ದರು.
ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆದಿತ್ತು. ಅದರ ಫಲಿತಾಂಶ ಪ್ರಕಟವಾಗಲಿದೆ. ಮಂಡಳೊಯ ಅಧಿಕಾರಿಗಳು ಮಾಧ್ಯಮಗೋಷ್ಠಿ ನಡೆಸಿದ ನಂತರ ಫಲಿತಾಂಶವು http://karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.

error: Content is protected !!