KPCL Result | ಕೆಪಿಸಿಎಲ್ ತಾತ್ಕಾಲಿಕ‌ ಅಂಕ ಪಟ್ಟಿ ಬಿಡುಗಡೆ ಮಾಡಿದ ಕೆಇಎ, ಲಿಂಕ್ ಗಾಗಿ ಓದಿ

KEA

 

 

ಸುದ್ದಿ‌ ಕಣಜ.ಕಾಂ ಬೆಂಗಳೂರು
BENGALURU: ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್- KPCL Result) ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್, ಕೆಮಿಸ್ಟ್‌ ಮತ್ತಿತರ 622 ಹುದ್ದೆಗಳ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

READ | ಇಂದು ಎಸ್ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ, ಯಾವ ಲಿಂಕ್ ನಲ್ಲಿ ಲಭ್ಯ?

ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್‌ನಲ್ಲಿ ನೊಡಬಹುದು.
ಆಕ್ಷೇಪಣೆಗಳಿದ್ದಲ್ಲಿ ಮೇ 15ರೊಳಗೆ kea2023exam@gmail.com ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.
ಕೆಎಸ್‌ಎಫ್‌ಸಿ ಅಂಕಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇದ್ದ 41 ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆಯ ಅಂತಿಮ ಅಂಕ ಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಒಂದೆರಡು ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಲಾಗುತ್ತದೆ.

Click here for link

error: Content is protected !!