ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣವು ಮೇ 10 ರಿಂದ ತಾಂತ್ರಿಕ ದೋಷದಿಂದ ಕಾರ್ಯನಿರ್ವಹಿಸುತ್ತಿಲ್ಲವಾಗಿತ್ತು. ದುರಸ್ಥಿ ಕಾರ್ಯವು ಪ್ರಗತಿಯಲ್ಲಿದ್ದು, ಮೇ 10ರ ನಂತರದ ದಿನಗಳಲ್ಲಿ ಕೆ.ಎಸ್.ಬಿ ಯಿಂದ ಗಣಕೀಕೃತವಾಗಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನ: ಸ್ಥಾಪಿಸಲಾಗುತ್ತಿದ್ದು, ಈ ಸಮಯದಲ್ಲಿ ಯಾವುದೇ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದಲ್ಲಿ ಅವರುಗಳ ಕೋರಿಕೆಯ ಮೇರೆಗೆ ಅವಕಾಶ ಕಲ್ಪಿಸಲಾಗುವುದು.
READ | ಬ್ಯಾಂಕ್ ಬಳಕೆದಾರರೆ ಎಚ್ಚರ, ಇತ್ತೀಚೆಗೆ ಈ ಆ್ಯಪ್ ಡೌನ್ ಲೋಡ್ ಕೊಂಡಿದ್ದರೆ ಡಿಲೀಟ್ ಮಾಡಿ, ಇಲ್ಲಿದೆ ಪೂರ್ಣ ಮಾಹಿತಿ
ಇನ್ನಿತರ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬಾಕಿಯಿರುವವರು ಜಾಲತಾಣ ಪುನಃಸ್ಥಾಪಿತಗೊಂಡ ಕೂಡಲೇ ನವೀಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಯಾವುದಾದರೂ ಮಾಹಿತಿ ಇದ್ದಲ್ಲಿ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಸೈನಿಕ ಕಲ್ಯಾಣ ಮತ್ತು ಪನರ್ವಸತಿ ಇಲಾಖೆ ಪ್ರಭಾರ ಉಪನಿರ್ದೇಶಕ ಡಾ. ಸಿ.ಎ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 08182-220925 ಸಂಪರ್ಕಿಸುವುದು.