One click many news | ವಿದ್ಯಾರ್ಥಿಗಳೇ ಗಮನಿಸಿ, ಹಾಸ್ಟೆಲ್ ಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ, ಯುವನಿಧಿಗೆ ಅರ್ಜಿ ಆಹ್ವಾನ

one click many news 1

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‍ಲೈನ್ ಅಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜು.23ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಯುವನಿಧಿಗೆ ಆನ್‍ಲೈನ್ ಅರ್ಜಿ ಆಹ್ವಾನ

Yuva nidhi

ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆ(Yuva nidhi scheme)ಗೆ ನೋಂದಣಿ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‍ಲೈನ್ ನೋಂದಣಿ ಆಹ್ವಾನಿಸಿದೆ.
2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ₹3000 (ಪದವೀಧರ ನಿರುದ್ಯೋಗಿಗಳು) ಹಾಗೂ ₹1500 (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಪ್ರತಿ ತಿಂಗಳು ಸ್ವಯಂ ಘೋಷಣೆ
ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಗ್ರಾಮ ಒನ್, ಶಿವಮೊಗ್ಗ ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳು ನೇರ ನಗದು ಖಾತಗೆ ಜಮಾ ಆಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, 2ನೇ ತಿರುವು, ಗುತ್ಯಪ್ಪ ಕಾಲೋನಿ ಶಿವಮೊಗ್ಗ. ದೂ.ಸಂ.:08182-255293 ನ್ನು ಸಂಪರ್ಕಿಸುವುದು.

READ | ಕದಂಬರ ಅರಸ ರವಿವರ್ಮನ ಕಾಲದ ಶಾಸನ ಪತ್ತೆ, ಏನಿದರ ವಿಶೇಷ, ಇದುವರೆಗೆ ಸಿಕ್ಕ ಶಾಸನಗಳೆಷ್ಟು?

 

error: Content is protected !!