Accident | ಭೀಕರ ಅಪಘಾತ, ಒಬ್ಬನ ಸಾವು, ಇನ್ನೊಬ್ಬನಿಗೆ ಗಂಭೀರ ಗಾಯ

Kumsi police station

 

 

ಸುದ್ದಿ ಕಣಜ.ಕಾಂ ಕುಂಸಿ
KUMSI: ಸಾಗರದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಬೈಕಿಗೆ ಗೂಡ್ಸ್ ವಾಹನವೊಂದು ಮಂಗಳವಾರ ರಾತ್ರಿ ಡಿಕ್ಕಿ ಹೊಡೆದಿದ್ದು, ಬೈಕ್‌ ಚಾಲನೆ ಮಾಡುತ್ತಿದ್ದವ ಮೃತಪಟ್ಟಿದ್ದಾನೆ.
ಬೈಕಿನಲ್ಲಿ‌ ಬರುತ್ತಿದ್ದವರ ಬಗ್ಗೆ ಖಚಿತ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಕುಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕೋಣೆಹೊಸೂರು ಬಳಿ ಸಂಭವಿಸಿರುವ ಅಪಘಾತದಲ್ಲಿ ಬೈಕ್ ಚಾಲನೆ ಮಾಡುತ್ತಿದ್ದವ ಗಂಭೀರ ಗಾಯಗೊಂಡಿದ್ದ ತಕ್ಷಣ ಶಿವಮೊಗ್ಗದ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

READ | ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ ಓಪನ್, ಎಷ್ಟು ಕ್ಯೂಸೆಕ್ಸ್ ನೀರು ಬಿಡುಗಡೆ?

error: Content is protected !!