ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೂ ಸಹ ಗೃಹಲಕ್ಷ್ಮೀ ಯೋಜನೆ(Gruha lakshmi scheme)ಯನ್ನು ಜಾರಿಗೊಳಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರು ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ, ಪಾಸ್‍ಪೋರ್ಟ್ ಸೈಜ್ ಫೋಟೋ ಮತ್ತು ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ಲಗತ್ತಿಸಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ದೂ.ಸಂ.: 08182-295514 ನ್ನು ಸಂಪರ್ಕಿಸುವುದು.
READ | ಶಿವಮೊಗ್ಗದಲ್ಲಿ ರೆಡ್ ಅಲರ್ಟ್, ಎಲ್ಲಿ ಎಷ್ಟು ಮಳೆಯಾಗಿದೆ? ಹಾನಿ ಎಷ್ಟು?