ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA (WEATHER NEWS): ಕಳೆದ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನೊಣಬೂರು ಪಂಚಾಯಿತಿ ವ್ಯಾಪ್ತಿಯಲ್ಲಿ 264.0 ಮಿಮೀನಷ್ಟು ಅಧಿಕ ಮಳೆ ದಾಖಲಾಗಿದೆ.
READ | ಕೊಡಚಾದ್ರಿ ಸಮೀಪ ಧರೆ ಕುಸಿತ, ಕಿರುಸೇತುವೆ ಹಾನಿಯಿಂದ ಗ್ರಾಮಗಳ ನಡುವೆ ಸಂಪರ್ಕ ಕಟ್
KSNDMC ಸ್ಥಾಪಿಸಿರುವ ಗ್ರಾಮ ಪಂಚಾಯಿತಿ ಮಟ್ಟದ ಮಳೆಮಾಪನ ಕೇಂದ್ರಗಳಲ್ಲಿ ದಾಖಲಾದ ಮಳೆ ದತ್ತಾಂಶಗಳ ಅನ್ವಯ ನೊಣಬೂರು ವ್ಯಾಪ್ತಿಯಲ್ಲಿ ಉತ್ತಮ ಮಳೆ ಸುರಿದಿದೆ.
ರಾಜ್ಯದ ಕರಾವಳಿ ಮತ್ತು ಕರಾವಳಿಗೆ ಹೊಂದಿಕೊಂಡ ಮಲೆನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಕೆಲವೆಡೆ ಅಧಿಕ ಮಳೆಯಾಗಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಹಗುರ ಮಳೆಯಾಗಿದೆ.
ರಾಜ್ಯದಲ್ಲಿ ಒಟ್ಟಾರೆ ಭಾನುವಾರ ಕಳೆದ 24 ಗಂಟೆಗಳಲ್ಲಿ 9.0 ಮಿ.ಮೀ ವಾಡಿಕೆ ಮಳೆಯಿದ್ದು, ವಾಸ್ತವಿಕ 4.0 ಮಿ.ಮೀ ಮಳೆಯಾಗಿದೆ.
ಮಳೆ ಮುನ್ಸೂಚನೆ
ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಕರಾವಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಅಲ್ಲಲ್ಲಿ ಅಧಿಕ ಮಳೆಯಾಗಲಿದೆ. ಉಳಿದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.