ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ಲೋಕಾಯುಕ್ತ (Karnataka Lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜುಲೈ ತಂಗಳಲ್ಲಿ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
READ | ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಎಲ್ಲೆಲ್ಲಿ ಭೇಟಿ ನೀಡಲಿದ್ದಾರೆ?
* ಜು.24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹಾಗೂ ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ
* ಜು.25 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ
* ಜು.26 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ
* ಜು. 29 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಮತ್ತು ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ.
* ಜು.30 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ದಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.