ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ (Nursing Job) ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ (BSc/ ಜಿಎನ್‍ಎಂ (GNM) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿ(Germany)ಯಲ್ಲಿ ಉದ್ಯೋಗವನ್ನು ಕಲ್ಪಿಸಲು ಮುಂದೆ ಬಂದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
READ | ಶಿವಮೊಗ್ಗದಲ್ಲಿ ಉಪನ್ಯಾಸಕರ ಹುದ್ದೆಗೆ ಅವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಕರ್ನಾಟಕ ರಾಜ್ಯದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ಸೂಕ್ತ ವಿದ್ಯಾರ್ಹತೆ ಹೊಂದಿರುವ ನರ್ಸಿಂಗ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇರಳ ರಾಜ್ಯದ ತಿರುವನಂತಪುರದ ತರಬೇತಿ ಕೇಂದ್ರದಲ್ಲಿ 8 ತಿಂಗಳ ಕಾಲ ಜರ್ಮನ್ ಭಾಷೆಯ ಬಗ್ಗೆ ತರಬೇತಿ ನೀಡಲಿದೆ. ಈ ಸಂದರ್ಭದಲ್ಲಿ ಉಚಿತ ಊಟ, ವಸತಿ ಸೌಲಭ್ಯ ನೀಡುವುದರ ಜೊತೆ ಪ್ರಯಾಣ ವ್ಯವಸ್ಥೆಯನ್ನು ಒದಗಿಸುತ್ತಿದೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಭಾರತೀಯ ನರ್ಸಿಂಗ್ ಲೈಸೆನ್ಸ್ ಹೊಂದಿದ್ದು, ಹೊಸಬರು/ ಅನುಭವವುಳ್ಳ 38 ವರ್ಷದೊಳಗಿನ ಮಹಿಳೆಯರು/ ಪುರುಷರು ಅರ್ಜಿ ಸಲ್ಲಿಸಬಹುದಾಗಿದೆ. ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದೊಯ್ಯುವ ಅವಕಾಶವಿರುವುದಿಲ್ಲ.
ಆಸಕ್ತರು ಕಾರ್ಮಿಕ ಅಧಿಕಾರಿಗಳ ಕಚೇರಿ, ಉಪವಿಭಾಗ ಶಿವಮೊಗ್ಗ, 2ನೇ ಮಹಡಿ, ವಾಣಿಜ್ಯ ಸಂಕೀರ್ಣ, ಸೂಡಾ ಕಾಂಪ್ಲೆಕ್ಸ್, ಪೊಲೀಸ್ ಚೌಕಿ, ವಿನೋಬನಗರ, ಶಿವಮೊಗ್ಗ ಇಲ್ಲಿ ನೋಂದಾಯಿಸಿಕೊಳ್ಳುವಂತೆ ಕಾರ್ಮಿಕ ಅಧಿಕಾರಿ ಎಂ.ಪಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-248940 ನ್ನು ಸಂಪರ್ಕಿಸುವುದು.