Power cut | ನಾಳೆ ಶಿವಮೊಗ್ಗದ ಹಲವೆಡೆ ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯ?

POWER CUT 1

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ನಗರ ಉಪವಿಭಾಗ 2ರ ಮಂಡ್ಲಿ ಘಟಕ 6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಜು.25ರ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯವಾಗಲಿದೆ.‌ ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ (MESCOM) ಪ್ರಕಟಣೆ ಮನವಿ ಮಾಡಿದೆ.

READ | ಭೀಕರ ರಸ್ತೆ ಅಪಘಾತ, ಕ್ರೈಸ್ತ ಧರ್ಮಗುರು ಸಾವು

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪೇಪರ್ ಪ್ಯಾಕೇಜ್, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಮಾಕಮ್ಮಬೀದಿ, ಕೆರೆದುರ್ಗಮ್ಮನ ಬೀದಿ, ಪುಟ್ಟನಂಜಪ್ಪಕೇರಿ, ಅಜಾದ್ ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತೆ, ಇಮಾಮ್ ಬಡಾ, ಮುರಾದ್‍ನಗರ, ಕ್ರೌನ್ ಪ್ಯಾಲೇಸ್ ಶಾದಿಮಹಲ್, ತಾಹಾ ಶಾದಿಮಹಲ್, ಮಂಡಕ್ಕಿಭಟ್ಟಿ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕೆ.ಆರ್. ಕುಡಿಯುವ ನೀರಿನ ಸ್ಥಾವರ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳ್ಯ, ಕುರುಬರ ಪಾಳ್ಯ, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ, ಕಾಮತ್ ಲೇಔಟ್, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಶರಾವತಿನಗರ, ಶಾರದ ಕಾಲೊನಿ ಮತ್ತು ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುತ್ತಿದೆ.

26ರಂದು ವ್ಯತ್ಯಯ

SHIMOGA: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5 ರಲ್ಲಿ ಮೆಸ್ಕಾಂ ವತಿಯಿಂದ ಜುಲೈ 26 ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಗೋಪಾಳಗೌಡ ಬಡಾವಣೆ ಡಿ, ಇ, ಎಫ್ ಬ್ಲಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!