ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಇಬ್ಬರಿಗೆ 20 ವರ್ಷ ಕಠಿಣ ಕಾರಾವಾಸ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1(POCSO) ನ್ಯಾಯಾಧೀಶರಾದ ಜೆ.ಎಸ್. ಮೋಹನ್ ಆದೇಶಿಸಿದ್ದಾರೆ.
2023ನೇ ಸಾಲಿನಲ್ಲಿ ಶಿವಮೊಗ್ಗ ತಾಲ್ಲೂಕಿನ 37 ವರ್ಷ ಮತ್ತು 39 ವರ್ಷದ ಯುವಕರಿಬ್ಬರು 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುತ್ತಾರೆಂದು ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಕುಂಸಿ ಪೊಲೀಸ್ ಠಾಣೆಯಲ್ಲಿ ಕಲಂ 376 (2), 376(3) ಐಪಿಸಿ ಮತ್ತು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖಾಧಿಕಾರಿ ಹರೀಶ್ ಕೆ.ಪಾಟೀಲ್ ಪ್ರಕರಣದ ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಆರೋಪಿತರ ವಿರುದ್ಧದ ಆರೋಪ ದೃಧಪಟ್ಟ ಹಿನ್ನೆಲೆಯಲ್ಲಿ ಯುವಕರಿಬ್ಬರಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ, 1ನೇ ಆರೋಪಿಗೆ ₹1,15,000 ದಂಡ ಮತ್ತು 2ನೇ ಆರೋಪಿಗೆ ₹1,05,000 ದಂಡ, ದಂಡದ ಮೊತ್ತದಲ್ಲಿ ₹2 ಲಕ್ಷ ಮತ್ತು ಸರ್ಕಾರದಿಂದ ₹10 ಲಕ್ಷಗಳನ್ನು ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ ನೀಡಲು ಆದೇಶಿಸಲಾಗಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಚ್.ಆರ್.ಶ್ರೀಧರ್ ವಾದ ಮಂಡಿಸಿದ್ದರು.
READ | ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ