ಸುದ್ದಿ ಕಣಜ.ಕಾಂ ಶಿವಮೊಗ್ಗ
(CRIME NEWS) SHIVAMOGGA: ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ಹೊಂದಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.
READ | ಭೀಕರ ಅಪಘಾತ ಒಂದು ಸಾವು, ಮತ್ತೊಬ್ಬನಿಗೆ ಗಾಯ
ಅಶೋಕ ನಗರದ ಇಬ್ರಾಹಿಂ ಅಲಿಯಾಸ್ ಇಬ್ಬು (30) ಎಂಬಾತನನ್ನು ಬಂಧಿಸಲಾಗಿದೆ. ಈತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 11 ಪ್ರಕರಣಗಳು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ 5, ವಿನೋಬನಗರ ಪೊಲೀಸ್ ಠಾಣೆಯ 3, ತುಂಗಾನಗರ ಪೊಲೀಸ್ ಠಾಣೆಯ 2, ಕುಂಸಿ ಪೊಲೀಸ್ ಠಾಣೆಯ 1 ಮತ್ತು ಸಾಗರ ಟೌನ್ ಪೊಲೀಸ್ ಠಾಣೆಯ 1 ಪ್ರಕರಣ ಸೇರಿ ಒಟ್ಟು 23 ಮನೆಗಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದು, ನ್ಯಾಯಾಲಯವು ಆರೋಪಿ ವಿರುದ್ಧ ವಾರೆಂಟ್ ಹೊರಡಿಸಿತ್ತು.
ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ರವಿ ಪಾಟೀಲ್, ಸಿಬ್ಬಂದಿ ರುದ್ರೇಶ್, ಮಂಜಪ್ಪ, ರವೀಂದ್ರ ಪ್ರಸಾದ್, ಮಂಜುನಾಥ್ ನಾಯ್ಕ್ ತಂಡವು ಆರೋಪಿಯನ್ನು ಬಂಧಿಸಿ ಎರಡನೇ ಜೆಎಂಎಫ್.ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇಬ್ಬರು ಆರೋಪಿಗಳ ಬಂಧನ
SHIMOGA: ಬಾಪೂಜಿ ನಗರದಲ್ಲಿ ಮನೆಯ ಬೀಗ ಮುರಿದು ಬಂಗಾರದ ಒಡವೆಗಳು ಮತ್ತು ಹಣವನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಗಳನ್ನು ಬಂಧಿಸಲಾಗಿದೆ.
ಚಿಕ್ಕಲ್ ನಿವಾಸಿ ಮೊಹಮ್ಮದ್ ರಫೀಕ್ ಅಲಿಯಾಸ್ ಕಾಣ(25), ಬಾಪೂಜಿನಗರದ ಅತಾವುಲ್ಲಾ(24) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ₹7,62,000 ಮೌಲ್ಯದ 127 ಗ್ರಾಂ ಬಂಗಾರದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇವರು 2022ರಲ್ಲಿ ನಗರದ ದಸ್ತಗೀರ್ ಖಾನ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ್ದರು. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.