ರಾಜ್ಯ ಬಿಜೆಪಿಯಲ್ಲಿ‌‌ ನನಗೆ ಸೈಡ್ ಲೈನ್ ಮಾಡುತ್ತಿಲ್ಲ: ಯಡಿಯೂರಪ್ಪ

 

 

ಸುದ್ದಿ‌‌ ಕಣಜ.ಕಾಂ‌ | KARNATAKA | POLITICAL
ಶಿವಮೊಗ್ಗ: ಬಿಜೆಪಿ ಪಕ್ಷದಲ್ಲಿ ತಮಗೆ ಸೈಡ್ ಲೈನ್ ಮಾಡುತ್ತಿಲ್ಲ. ಈ ಬಗ್ಗೆ ಕೇಳಿ‌ ಬರುತ್ತಿರುವ ಆರೋಪಗಳೆಲ್ಲ ಶುದ್ಧ ಸುಳ್ಳು ಎಂದು ಮಾಜಿ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಹೇಳಿದರು.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದೇನೆಯೇ ವಿನಹ ಯಾರೂ‌ ಒತ್ತಡ ಹೇರಿಲ್ಲ ಎಂದು ಹೇಳಿದರು.
ಮಾಜಿ ಸಿಎಂ, ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡುವುದು ಬಿಡಬೇಕು. ಇಲ್ಲದಿದ್ದರೆ ಜನರೇ ಅವರಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು‌.
ಕಾಂಗ್ರೆಸ್‌ ಲೆಕ್ಕಾಚಾರ ಫಲಿಸದು
ಬೆಲೆ ಏರಿಕೆ ವಿಚಾರವನ್ನೇ ದೊಡ್ಡದು ಮಾಡಿ ಕಾಂಗ್ರೆಸ್ ಚುನಾವಣೆಯಲ್ಲಿ ಲಾಭ ಪಡೆಯುವ ಹುನ್ನಾರ ನಡೆಸಿದೆ. ಆದರೆ, ಅದು ಫಲಿಸುವುದಿಲ್ಲ. ಬೆಲೆ ಏರಿಕೆಗೆ ಕಾರಣವೇನು ಎಂಬುವುದು ಜನರಿಗೆ ಗೊತ್ತಿದೆ ಎಂದು ಹೇಳಿದರು.
ಮೋದಿ ಅಲ್ಪಸಂಖ್ಯಾತರಿಗೆ ವಂಚನೆ ಮಾಡಿರುವ ಉದಾಹರಣೆ ಕೊಡಿ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಅವಧಿಯಲ್ಲಿ ಯಾರಿಗೂ ಅನ್ಯಾಯ ಮಾಡಿಲ್ಲ. ಅಲ್ಪಸಂಖ್ಯಾತರಿಗೆ ವಂಚನೆ ಮಾಡಿದ ಉದಾಹರಣೆ ಇದ್ದರೆ ನನಗೆ ಕೊಡಿ ಎಂದು ಯಡಿಯೂರಪ್ಪ ಬಹಿರಂಗ ಸವಾಲು ಹಾಕಿದರು.
ಸಿಂದಗಿ ಮತ್ತು ಹಾನಗಲ್ ಉಪ ಚುನಾವಣಾ ಕಣದಲ್ಲಿ ಪ್ರಚಾರ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ಟೋಬರ್ 20, 21ರಂದು ಸಿಂದಗಿ, ಅ.22,23 ರಂದು ಹಾನಗಲ್ ನಲ್ಲಿ ಪ್ರಚಾರ ಕಾರ್ಯ ನಡೆಸಲಾಗುತ್ತದೆ. ಅಗತ್ಯ ಬಿದ್ದರೆ ಹಾನಗಲ್ ನಲ್ಲಿ ಹೆಚ್ಚುವರಿಯಾಗಿ ಇನ್ನೊಂದು ದಿನ ಪ್ರಚಾರ ಮಾಡುತ್ತೇನೆ ಎಂದರು.

https://www.suddikanaja.com/2020/11/17/veerashaiva-lingayat-development-corporation/

error: Content is protected !!