ಸುದ್ದಿ ಕಣಜ.ಕಾಂ | DISTRICT | POLITICS
ಶಿವಮೊಗ್ಗ: ನಗರದ ಮಹಾವೀರ ವೃತ್ತದ ರಸ್ತೆಯನ್ನು ತಡೆದು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಪ್ರತಿಭಟನೆ ಮಾಡಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಕೂಡಲೇ ಅವರು ರಾಜ್ಯದ ಜನತೆಗೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮುಖಂಡರಾದ ಕೆ.ಬಿ. ಪ್ರಸನ್ನಕುಮಾರ್, ಎನ್.ರಮೇಶ್, ರಾಮೇಗೌಡ, ರವಿಕುಮಾರ್, ಕೆ.ರಂಗನಾಥ್, ಸೌಗಂಧಿಕಾ, ಸ್ಟೆಲ್ಲಾ ಮಾರ್ಟಿನ್, ನಾಜೀಮಾ, ಪ್ರೇಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು.