ಒಳನಾಡು ಜಲಸಾರಿಗೆ ಇಲಾಖೆ ನೌಕರ ಹೃದಯಾಘಾತದಿಂದ ಸಾವು, ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ನಡೀತು ಪ್ರತಿಭಟನೆ

 

 

ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ದಿನಗೂಲಿ ನೌಕರರೊಬ್ಬರು ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿರುವ ಘಟನೆ ಕಾರ್ಗಲ್ ಸಮೀಪದ ತಳಕಳಲೆ ಹಿನ್ನೀರು ಪ್ರದೇಶದಲ್ಲಿ ನಡೆದಿದೆ.
ಧನಪಾಲ್ ಎಂಬುವವರು ಮೃತಪಟ್ಟ ವ್ಯಕ್ತಿ. ಇವರು ಕಳೆದ 20 ವರ್ಷಗಳಿಂದ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ಹೃದಯಾಘಾತದಿಂದ ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕಿತ್ಸೆಗಾಗಿ ಕರೆದುಕೊಂಡು ಬರಲಾಗಿದೆ. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಸ್ಥಳಕ್ಕೆ ಬಾರದ ಅಧಿಕಾರಿಗಳು ಗ್ರಾಮಸ್ಥರ ಪ್ರತಿಭಟನೆ

ಧನಪಾಲ್ ಎಂಬುವವರು ಮೃತಪಟಿರುವ ವಿಚಾರವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಆದರೆ, ಯಾರು ಸ್ಥಳಕ್ಕೆ ಬಂದಿಲ್ಲ. ಇದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ.
ತದನಂತರ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತನ ಕುಟುಂಬಕ್ಕೆ 1.50 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಮಗನಿಗೆ ಅನುಕಂಪದ ನೌಕರಿ ನೀಡುವ ಭರವಸೆ ನೀಡಿದ್ದಾರೆ. ಆಮೇಲೆ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದಿದ್ದಾರೆ.

https://www.suddikanaja.com/2021/09/07/ksrtc-employee-suicide-in-bhadravathi/

error: Content is protected !!