ಶಿವಮೊಗ್ಗ ಪೊಲೀಸರ ಕಸ್ಟಡಿಯಲ್ಲಿ ಶಂಕಿತ ಉಗ್ರ

 

 

ಸುದ್ದಿ ಕಣಜ.ಕಾಂ | KARNATAKA | CRIME NEWS
ಶಿವಮೊಗ್ಗ: ಶಂಕಿತ ಉಗ್ರನೊಬ್ಬನನ್ನು ಶಿವಮೊಗ್ಗ ಪೊಲೀಸರು ಶನಿವಾರ ನಗರಕ್ಕೆ ಕರೆದುಕೊಂಡು ಬಂದಿದ್ದು, ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

ಇತ್ತೀಚೆಗೆ ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ರೌಡಿ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ ಕರೆ ಮಾಡಲಾಗಿತ್ತು. ಹಣ ನೀಡುವಂತೆ ಬೇಡಿಕೆ ಇಡಲಾಗಿತ್ತು. ಉದ್ಯಮಿಯು ದೂರು ನೀಡಿದ ನಂತರ ತನಿಖೆ ನಡೆಸಿದ ಪೊಲೀಸರು ಈ ಮುಂಚೆ ಉದ್ಯಮಿಯು ಹಣ ಸಂದಾಯ ಮಾಡಿದ್ದ ಖಾತೆಯ ಮಾಹಿತಿ ಕಲೆ ಹಾಕಲಾಗಿದೆ. ಆಗ ಶಂಕಿ ಉಗ್ರ ಸದ್ದಾಂ ಹುಸೇನ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣ ಸಂಬಂಧ ಸದ್ದಾಂನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು ಶನಿವಾರ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಈ ವೇಳೆ, ನ್ಯಾಯಾಲಯ ಆವರಣದಲ್ಲಿ ಭಾರಿ ಭದ್ರತೆ ಒದಗಿಸಲಾಗಿತ್ತು. ಈತನನ್ನು ನವೆಂಬರ್ 2ರ ವರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಕಾರಾಗೃಹದಲ್ಲಿ ಸಜಾಬಂಧಿ
ಪ್ರಸ್ತುತ ಬೆಂಗಳೂರಿನ ಪರಪ್ಪನ ಆಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಶಂಕಿ ಉಗ್ರ ಸದ್ದಾಂ ಹುಸೇನ್ ಹಾಗೂ ಬೇರೊಂದು ಪ್ರಕರಣದಲ್ಲಿ ಶಿಕ್ಷೆಗೀಡಾಗಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಬರಲಾಗಿತ್ತು.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.

https://www.suddikanaja.com/2021/10/28/attack-on-businessman-house-and-demand-for-money-at-shivamogga/

error: Content is protected !!