ಬಸ್‍ನಲ್ಲಿ ಪ್ರಯಾಣಿಸುವಾಗ ಹುಷಾರ್, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಇಬ್ಬರ ಲ್ಯಾಪ್ ಟಾಪ್ ಕಳ್ಳತನ

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವೈದ್ಯರ ಲ್ಯಾಪ್ ಟಾಪ್ ಕಳ್ಳತನ ಮಾಡಲಾಗಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುರಲೆ ನಿವಾಸಿ ಡಾ.ಚೇತನ್ ಹಾಗೂ ಡಾ.ಕಿರಣ್ ಎಂಬುವವರ ಲ್ಯಾಪ್ ಟಾಪ್ ಕಳೆದುಕೊಂಡವರು. ಇವರು ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿಗೆ ಹೋಗಿ ವಾಪಸ್ ಬರುವಾಗ ಘಟನೆ ನಡೆದಿದೆ.

ಲಗೇಜ್ ಬಾಕ್ಸ್ ನಲ್ಲಿಟ್ಟ ಲ್ಯಾಪ್ ಟಾಪ್ ಮಾಯ!

ಬೆಂಗಳೂರಿನಿಂದ ಬಸ್ ಹತ್ತುವಾಗ ಲ್ಯಾಪ್ ಟಾಪ್ ಅನ್ನು ಬ್ಯಾಗಿನೊಂದಿಗೆ ಲಗೇಜ್ ಬಾಕ್ಸ್ ನಲ್ಲಿಟ್ಟಿದ್ದಾರೆ. ಆದರೆ, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಹೊತ್ತಿಗೆ ಬಾಕ್ಸ್ ನಲ್ಲಿ ಲ್ಯಾಪ್ ಟಾಪ್ ಇರಲಿಲ್ಲ. ಎಲ್ಲಿ ಕಳ್ಳತನವಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ದೊಡ್ಡಪೇm ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.

https://www.suddikanaja.com/2021/07/21/ksrtc-special-trip-to-jogfalls/

error: Content is protected !!