ದೇಶ್ ಕೀ ಬಾತ್ ಫೌಂಡೇಶನ್‍ನಿಂದ ರೌಂಡ್ ಟೇಬಲ್ ಕಾನ್ಫರೆನ್ಸ್

 

 

ಸುದ್ದಿ ಕಣಜ.ಕಾಂ | KARNATAKA | DESH KI BAAT
ಶಿವಮೊಗ್ಗ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ದೇಶ್ ಕಿ ಬಾತ್ ಫೌಂಡೇಶನ್ ವತಿಯಿಂದ ‘ರೌಂಡ್ ಟೇಬಲ್ ಕಾನ್ಫರೆನ್ಸ್’ ಎಂಬ ವಿಭಿನ್ನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾದೇಶಿಕ ಸಂಯೋಜಕ ಮೊಹಮ್ಮದ್ ರಫೀ ತಿಳಿಸಿದ್ದಾರೆ.
ದೇಶದಾದ್ಯಂತ ಪ್ರತಿ ರಾಜ್ಯ, ಜಿಲ್ಲಾ, ತಾಲೂಕು ಮತ್ತು ಗ್ರಾಮಗಳ ಮಟ್ಟದಲ್ಲಿ ನಿರುದ್ಯೋಗ ಸಮಸ್ಯೆಯ ಬಗ್ಗೆ ಅರಿವು ಮೂಡಿಸುವುದು ರಾಷ್ಟೀಯ ಉದ್ಯೋಗ ನೀತಿ ದೇಶದಾದ್ಯಂತ ಜಾರಿ ಆಗಬೇಕು ಹಾಗೂ ನಿರುದ್ಯೋಗ ಸಮಸ್ಯೆ ಕುರಿತು ಕೇಂದ್ರ ಸರ್ಕಾರವನ್ನು ಎಚ್ಚರಿಸುವುದು ದೇಶ್ ಕಿ ಬಾತ್ ಫೌಂಡೇಶನ್ ಅಭಿಯಾನದ ಮೂಲ ಉದ್ದೇಶ ಎಂದು ಹೇಳಿದ್ದಾರೆ.

ದೇಶದಾದ್ಯಂತ ಪ್ರತಿಭಟನೆ

ನಿರುದ್ಯೋಗ ಸಮಸ್ಯೆ ಬಗೆಹರಿಸಲು `ರೌಂಡ್ ಟೇಬಲ್ ಕಾನ್ಫರೆನ್ಸ್’ ಮಾಡಲಾಗುತ್ತದೆ. ಅಲ್ಲದೆ, ಈ ಕೆಳಕಂಡ ಬೇಡಿಕೆಗಳನ್ನು ಇಟ್ಟುಕೊಂಡು ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ. ದೇಶದಲ್ಲಿ ಈಗ 30 ಕೋಟಿ ಯುವಕರು ನಿರುದ್ಯೋಗಿಗಳಾಗಿದ್ದಾರೆ. ನಿರುದ್ಯೋಗ ಸಮಸ್ಯೆಯಿಂದ ಆತ್ಮಹತ್ಯೆಗೂ ಶರಣಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ನವೆಂಬರ್ 19ರಂದು ಬೆಂಗಳೂರಿನಲಿ ಬೆಳಗ್ಗೆ 10.30ರಿಂದ 12.30ರ ವರೆಗೆ ರೌಂಡ್ ದ ಟೇಬಲ್ ಹಮ್ಮಿಕೊಳ್ಳಲಾಗಿದೆ. ದೆಹಲಿಯಿಂದ ದೇಶ್ ಕಿ ಬಾತ್ ಫೌಂಡೇಶನ್ ಕೇಂದ್ರ ಸಂಯೋಜಕ ವಿಜಯ್ ಫುಲಾರ, ಪ್ರಾದೇಶಿಕ ಸಂಯೋಜಕ ಮೊಹಮ್ಮದ್ ರಫೀ ಸೇರಿದಂತೆ ರಾಜ್ಯದ ಹಲವು ಸದಸ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.

https://www.suddikanaja.com/2021/01/26/koo-application-developed-by-indian-got-good-response-from-users/

error: Content is protected !!