ಆಲದಹಳ್ಳಿ ಘಟನೆ ಮಾಸುವ ಮುನ್ನವೇ ಸಾಗರದಲ್ಲಿ ಆಹಾರ ಸೇವಿಸಿದ 100 ಜನರಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು

 

 

ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಹರಮಘಟ್ಟ ಬಳಿಯ ಆಲದಹಳ್ಳಿ ಗ್ರಾಮದ ಘಟನೆ ಮಾಸುವ ಮುನ್ನವೇ ಸಾಗರ ತಾಲೂಕಿನಲ್ಲೂ ಫುಡ್ ಪಾಯಿಸನ್ ಆಗಿ 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಾಗರ ತಾಲೂಕಿನ ಜೋಗ, ಕಾರ್ಗಲ್, ಲಿಂಗನಮಕ್ಕಿ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಜನ ಏಕಾಏಕಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅಸ್ವಸ್ಥರಾಗಲು ಕಾರಣವೇನು?

ಸಾಗರದ ವಿವಿಧೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅಲ್ಲಿ ಆಹಾರ ಸೇವಿಸಿದವರಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಶುಕ್ರವಾರ ಬೆಳಗ್ಗೆಯಿಂದಲೇ ಆರೋಗ್ಯ ಸಮಸ್ಯೆ ಉಲ್ಬಣಿಸಿದ್ದು, ಅಸ್ವಸ್ಥರಾದವರನ್ನು ಕಾರ್ಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಢಾಬಾವೊಂದರಲ್ಲಿ ಆಹಾರ ಸೇವನೆ ಮಾಡಿದ್ದಾರೆ ಎನ್ನಲಾದ 12 ಜನರಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಇದಕ್ಕೆ ಖಚಿತ ಕಾರಣ ಪತ್ತೆಯಾಗಿಲ್ಲ. ಆರೋಗ್ಯ ಇಲಾಖೆಯಿಂದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ತಪಾಸಣೆ ನಂತರವಷ್ಟೇ ಕಾರಣ ಗೊತ್ತಾಗಲಿದೆ.
ಆಹಾರ ಅಥವಾ ನೀರಿನಲ್ಲಿ ಸಮಸ್ಯೆಯಿಂದಾಗಿ ಸಮಸ್ಯೆ ಉಂಟಾಗಿರಬಹುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.

https://www.suddikanaja.com/2021/11/12/above-100-people-admitted-in-hospital-after-having-food-in-marriage-reception/

error: Content is protected !!