ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತಿದ್ದೀರಾ? ಹಾಗಾದರೆ, ಇ-ಗ್ರಂಥಾಲಯ ಉಚಿತ ಸದಸ್ಯತ್ವ ಪಡೆಯಿರಿ

 

 

ಸುದ್ದಿ‌ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಸಾರ್ವಜನಿಕ ಓದುಗರ ಅನುಕೂಲಕ್ಕಾಗಿ ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಪ್ರಾರಂಭಿಸಲಾಗಿದೆ.
2021ನೇ ಸಾಲಿನ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಡಿಜಿಟಲ್ ಗ್ರಂಥಾಲಯ ಬಳಸಿಕೊಳ್ಳಲು ಉಚಿತವಾಗಿ ಡಿಜಿಟಲ್ ಗ್ರಂಥಾಲಯ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಜಾಲತಾಣ www.karnatakadigitalpubliclibrary.org ಮೂಲಕ e-Sarvajanika Granthalaya ಇ-ಗ್ರಂಥಾಲಯ ಸೇವೆ ಆ್ಯಪ್ ಡೌನ್‍ ಲೋಡ್ ಮಾಡಿಕೊಂಡು ಡಿಜಿಟಲ್ ಗ್ರಂಥಾಲಯದ ಸದಸ್ಯತ್ವವನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಮೊಬೈಲ್, ಕಂಪ್ಯೂಟರ್, ಲ್ಯಾಪ್‍ ಟಾಪ್, ಟ್ಯಾಬ್ ಮೂಲಕ ಪುಸ್ತಕಗಳು, ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಉಚಿತವಾಗಿ ಓದಬಹುದು.

FOLLOW US copy1 ಲಕ್ಷಕ್ಕೂ ಅಧಿಕ ಸ್ಟಡಿ ಮೆಟೇರಿಯಲ್
ಇ-ಸಾರ್ವಜನಿಕ ಗ್ರಂಥಾಲಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇ-ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಗಳು, ಸಿಇಟಿ, ಎನ್‍.ಇಇಟಿ, ಯುಪಿಎಸ್‍.ಸಿ, ಕೆಪಿಎಸ್‍.ಸಿ ಅಲ್ಲದೇ ರಾಜ್ಯ ಸರ್ಕಾರದ ಸಿಬಿಎಸ್‍.ಸಿ, ಐಸಿಎಸ್‍.ಇ, ಎನ್‍.ಸಿಇಆರ್.ಟಿ ಪಠ್ಯಪುಸ್ತಕಗಳು ಮತ್ತು ವಿವಿಧ ಭಾಷೆಗಳ ಪ್ರಾದೇಶಿಕ, ರಾಷ್ಟ್ರೀಯ ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳು ಲಭ್ಯವಿದ್ದು ವಿದ್ಯಾರ್ಥಿಗಳು ಸಾರ್ವಜನಿಕರು ಉಚಿತ ಸದಸ್ಯತ್ವ ಪಡೆದು ಇದರ ಸದುಪಯೋಗ ಪಡೆಯಬೇಕೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಳಿಸಿದ್ದಾರೆ.

https://www.suddikanaja.com/2020/11/05/read-books-in-online/

error: Content is protected !!