ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆ, 17ರ ವರೆಗೆ ಇರಲಿದೆ ವರ್ಷಧಾರೆ

 

 

ಸುದ್ದಿ ಕಣಜ.ಕಾಂ | DISTRICT | RAIN FALL
ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾರೀ ಗುಡುಗು ಸಹಿತ ಮಳೆಯಾಗುತ್ತಿದೆ. ಭಾನುವಾರ ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ನಂತರ ಧಾರಾಕಾರ ಮಳೆ ಸುರಿಯುತ್ತಿದೆ.

ತಮಿಳುನಾಡಿನಲ್ಲಿ ವಾಯುಭಾರ ಕುಸಿತದಿಂದಾಗಿ ನವೆಂಬರ್ 17ರ ವರೆಗೆ ಮಳೆಯ ಮುನ್ಸೂಚನೆ ನೀಡಿದ್ದು, ಅದರನ್ವಯ ಧಾರಾಕಾರ ವರ್ಷಧಾರೆಯಾಗುತ್ತಿದೆ. ಶಿವಮೊಗ್ಗದ ತಗ್ಗು ಪ್ರದೇಶಗಳಲ್ಲಿ ಮಳೆಯ ನೀರು ನುಗ್ಗುವ ಭೀತಿ ಎದುರಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಅರ್ಧಂಬರ್ಧ ಮಾಡಿದ್ದರಿಂದ ಜನರು ಓಡಾಡುವುದಕ್ಕೆ ಪರದಾಡಿದರು.

error: Content is protected !!