ಲಕ್ಕಿನಕೊಪ್ಪ ವೃತ್ತದಲ್ಲಿ ನಡೀತು ಭೀಕರ ಅಪಘಾತ

 

 

ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ತಾಲೂಕಿನ ಲಕ್ಕಿನಕೊಪ್ಪ ವೃತ್ತದಲ್ಲಿ ಕಾರು ಮತ್ತು ಖಾಸಗಿ ಬಸ್ ನಡುವೆ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಅದೃಷ್ಟವಷಾತ್ ಪ್ರಾಣಹಾನಿ ಸಂಭವಿಸಿಲ್ಲ.

ಲಕ್ಕಿನಕೊಪ್ಪ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದ ಬಳಿಕ ನೆರೆದ ಜನಸ್ತೋಮ, ಹೇಗಿತ್ತು ಸ್ಥಿತಿ, ವಿಡಿಯೋ ವೀಕ್ಷಿಸಿ.

ಕುವೆಂಪು ವಿಶ್ವವಿದ್ಯಾಲಯದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಲಕ್ಕಿನಕೊಪ್ಪ ಕ್ರಾಸ್ ಬಳಿ ಮಹಿಳೆ ಡ್ರೈವ್ ಮಾಡುತ್ತಿದ್ದ ಕಾರೊಂದು ಬಸ್ ಗೆ ಬಂದು ಅಪ್ಪಳಿಸಿದೆ. ಘಟನೆ ಭೀಕರತೆಗೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಬಸ್ ನ ಗಾಜು ಪುಡಿ ಪುಡಿಯಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಲೇ ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!