ಅಸಂಘಟಿತ ಕಾರ್ಮಿಕರಿಗೆ ಕೋವಿಡ್ ಪರಿಹಾರ ಧನ ನೀಡದಿದ್ದರೆ ಉಗ್ರ ಪ್ರತಿಭಟನೆಯ ಎಚ್ಚರಿಕೆ

 

 

ಸುದ್ದಿ ಕಣಜ.ಕಾಂ | DISTRICT | PROTEST
ಶಿವಮೊಗ್ಗ: ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಧನ ನೀಡದಿದ್ದರೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಪ್ರತಿಭಟನೆ ಮಾಡಲಾಗಿದೆ.

follow us in link treeರಾಜ್ಯ ಸರ್ಕಾರ ಕೋವಿಡ್ ಅವಧಿಯಲ್ಲಿಯೇ ₹2000 ಪರಿಹಾರ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಇದುವರೆಗೆ ಅದು ಈಡೇರಿಲ್ಲ ಎಂದು ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಸಂಘಟಿತ ಕಾರ್ಮಿಕರಿಗೆ ಜಿಲ್ಲೆಯಲ್ಲಿ ಸಮರ್ಪಕ ಪರಿಹಾರ ವಿತರಣೆ ಮಾಡಿಲ್ಲ. ಒಂದುವೇಳೆ, ತಕ್ಷಣವೇ ಸರ್ಕಾರ ಜಾಗೃತಗೊಳ್ಳದಿದ್ದರೆ, ಸಂಘದ ಗೌರವಾಧ್ಯಕ್ಷ ಹಾಗೂ ಶಾಸಕ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮನವಿ ನೀಡುವಾಗ ಸಂಘದ ಜಿಲ್ಲಾಧ್ಯಕ್ಷೆ ಸುರೇಖಾ ಪಾಲಕ್ಷಪ್ಪ, ರಾಜ್ಯಾಧ್ಯಕ್ಷ ಕುಪೇಂದ್ರ ಆಯನೂರು, ಉಪಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರತ್ನಾ ರಾಜು, ನಿರ್ಮಲಾ ಗುಡವಿ, ಪದ್ಮಾ ನವೀನ್, ಸಂಧ್ಯಾ ರಮೇಶ್, ನಿಷ್ಮಾ ರಾಘವೇಂದ್ರ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!