FDA ಸೇರಿದಂತೆ ವಿವಿಧ ಹುದ್ದೆಗಳು ಖಾಲಿ, ಅರ್ಜಿ ಸಲ್ಲಿಸಲು 9 ದಿನ ಮಾತ್ರ ಬಾಕಿ, ಪದವಿ, ಡಿಪ್ಲೋಮಾ, ಐಟಿಐ ಪಾಸ್ ಆದವರಿಗೆ ಅವಕಾಶ

 

 

ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಎಫ್.ಡಿ.ಎ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 9 ದಿನ ಮಾತ್ರ ಬಾಕಿ ಇದೆ.
ಅರ್ಜಿ ಸಲ್ಲಿಸಲು ನವೆಂಬರ್ 24 ಅಂತಿಮ ದಿನವಾಗಿತ್ತು. ಆದರೆ, ಅದನ್ನು ನವೆಂಬರ್ 30ರ ವರೆಗೆ ಮುಂದೂಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಿಂದ ಪದವಿ ಪಾಸಾದವರು ಎಫ್.ಡಿ.ಎ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಎಸ್.ಸಿ ಅಥವಾ ಡಿಪ್ಲೋಮಾ ಉತ್ತೀರ್ಣರಾದವರು ತಾಂತ್ರಿಕ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಐಟಿಐ ಉತ್ತೀರ್ಣರಾದವರು ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತಿದ್ದು, ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಡ್ಯ, ಮೈಸೂರು, ಶಿವಮೊಗ್ಗ, ಮಂಗಳೂರು, ಉಡುಪಿಯ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.

ಜನರಲ್, ಒಬಿಸಿ ಅಭ್ಯರ್ಥಿಗಳು 800 ರೂ. ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ 1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 400 ರೂ ನಿಗದಿಪಡಿಸಲಾಗಿದೆ. ಅಂಗವಿಕಲರು ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

NOTIFICATION

CLICK HERE TO APPLY

ಹುದ್ದೆ ಹುದ್ದೆಗಳ ಸಂಖ್ಯೆ
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ 02
ಪ್ರಥಮ ದರ್ಜೆ ಸಹಾಯಕರು 09
ತಾಂತ್ರಿಕ ಮೇಲ್ವಿಚಾರಕರು  05
ತಾಂತ್ರಿಕ ಸಹಾಯಕರು  13

https://www.suddikanaja.com/2021/01/17/jobs-in-kptcl-for-diploma-engineering-graduates/

error: Content is protected !!