ಶಿವಮೊಗ್ಗದಲ್ಲಿ ನಾಳೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

 

 

ಸುದ್ದಿ ಕಣಜ.ಕಾಂ | CITY | MARKET TRENDS
ಶಿವಮೊಗ್ಗ: ನವೆಂಬರ್ 25ರಂದು ಸೈಂಟ್ ಟಿ.ಎಲ್.ವಾಸ್ವಾನಿ ಅವರ ಜನ್ಮ ದಿನದ ನಿಮಿತ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಆದೇಶಿಸಿದ್ದಾರೆ.
ಮಹಾನಗರಪಾಲಿಕೆ ವ್ಯಾಪ್ತಿಯ ಮಾಂಸ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ಮುಚ್ಚಬೇಕು ಹಾಗೂ ಮಾಂಸ ಮಾರಾಟ ನಿಲ್ಲಿಸುವಂತೆ ತಿಳಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!