ವಿಧಾನ ಪರಿಷತ್ ಮತದಾನ ಬಹಿಷ್ಕಾರ, ಕಾರಣವೇನು?

 

 

ಸುದ್ದಿ ಕಣಜ.ಕಾಂ | TALUK | POLITICAL NEWS
ತೀರ್ಥಹಳ್ಳಿ: ಗೃಹ ಸಚಿವರ ತವರು ಕ್ಷೇತ್ರದಲ್ಲಿಯೇ ವಿಧಾನ ಪರಿಷತ್ ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಲಾಗಿದೆ.
ಒಂದೂವರೆ ಕೋಟಿ ರೂ. ಅನುದಾನ ಬಿಡುಗಡೆಗೆ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿಯ ಏಳು ಸದಸ್ಯರು ಈ ಭಾರಿ ವಿಧಾನ ಪರಿಷತ್ ಚುನಾವಣೆಗೆ ಮತ ಹಾಕದಿರಲು ನಿರ್ಧರಿಸಿದ್ದಾರೆ. ಅನುದಾನವಿಲ್ಲದೆ ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ಕೆಲಸಗಳನ್ನು ಮಾಡಲಾಗುತ್ತಿಲ್ಲ ಎಂದು ಸದಸ್ಯರು ಆರೋಪಿಸಿದ್ದಾರೆ.

ಅನುದಾನ ಮಂಜೂರು ಮಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ, ಯಾವುದೇ ಪ್ರಯೊಜನವಾಗಿಲ್ಲ ಎಂದು ತಿಳಿಸಿದ್ದಾರೆ.
ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂರು ಮರಳು ಕ್ವಾರಿಗಳಿವೆ. ಇವುಗಳಿಗೆ ಸರ್ಕಾರದಿಂದ ಕೋಟ್ಯಾಂತರ ರೂ ಲಾಭವಾಗುತ್ತಿದೆ. ಮೂರು ಕ್ವಾರಿಗಳಿಂದ ಪ್ರತಿ ವರ್ಷ ಗ್ರಾಮ ಪಂಚಾಯಿತಿಗೆ 84 ಲಕ್ಷ ರೂ. ಅನುದಾನ ಬಿಡುಗಡೆಯಾಗಬೇಕು. ಆದರೆ ಕಳೆದ ಎರಡು ವರ್ಷದಿಂದ ಅನುದಾನ ಬಿಡುಗಡೆಯಾಗಿಲ್ಲ. ಆದ್ದರಿಂದ 1.68 ಕೋಟಿ ರೂ. ಅನುದಾನ ಬಾಕಿ ಉಳಿದುಕೊಂಡಿದೆ ಎಂದು ತಿಳಿಸಿದ್ದಾರೆ.

ಹಣವಿಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಗುತ್ತಿಲ್ಲ ಎಂದು ಪಂಚಾಯಿತಿ ಸದಸ್ಯ ಸಂದೀಪ್ ತಿಳಿಸಿದ್ದಾರೆ.

error: Content is protected !!