ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯಲ್ಲಿ `ರಾಜಕೀಯ ರಣಾಂಗಣ’ ಮಾಡಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದ ಸರ್ಜಿ ಕನ್ವೆನ್’ಶನ್ ಹಾಲ್ ನಲ್ಲಿ ಶುಕ್ರವಾರ ಸಂಜೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಹಮ್ಮಿಕೊಂಡಿದ್ದ `ಚುನಾಯಿತ ಪ್ರತಿನಿಧಿಗಳ ಸಭೆ’ಯಲ್ಲಿ ಮಾತನಾಡಿದರು.
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಇದು ಕಾಂಗ್ರೆಸ್ ಗೆಲುವಿನ ಸಂಕೇತವಾಗಿದೆ. ಕಾಂಗ್ರೆಸ್ ಅಭಿಯಾನ ಶುರುವಾಗಲಿದ್ದು, ನೋಂದಣಿ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.