ಭದ್ರಾ ಜಲಾಶಯದಿಂದ ನೀರು ಹರಿಸುವ ಬಗ್ಗೆ ಡಿ.28ರಂದು ನಡೆಯಲಿದೆ ಮಹತ್ವದ ಸಭೆ

 

 

ಸುದ್ದಿ ಕಣಜ.ಕಾಂ | DISTRICT | CADA MEETING
ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ 2021-22ನೇ ಸಾಲಿನ ಬೇಸಿಗೆ ಬೆಳೆಗಳಿಗಾಗಿ ನೀರು ಹರಿಸುವ ಬಗ್ಗೆ ಚರ್ಚಿಸಲು ಡಿಸೆಂಬರ್ 28ರಂದು ಬೆಳಗ್ಗೆ 11 ಗಂಟೆಗೆ ಸಭೆಯನ್ನು ಕರೆಯಲಾಗಿದೆ.

READ | ಚನ್ನಗಿರಿಯಿಂದ ಭದ್ರಾವತಿಗೆ ಬೈಕಿನಲ್ಲಿ ತರುತಿದ್ದ ರಾಶಿ ರಾಶಿ ಮೊಬೈಲ್, ಪೊಲೀಸರೇ ಶಾಕ್!

ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕಚೇರಿ ಸಭಾಂಗಣಯಲ್ಲಿ 79ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆಯಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಭದ್ರಾ ಬಲದಂಡೆ, ಎಡದಂಡೆ ನಾಲೆಗಳು, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾ ನಾಲೆಗಳಲ್ಲಿ ನೀರನ್ನು ಹರಿಸುವ ಮತ್ತು ಬೆಳೆ ಕ್ಷೇತ್ರವನ್ನು ಪ್ರಕಟಿಸುವ ಕುರಿತು ತೀರ್ಮಾನ ಕೈಗೊಳ್ಳಲು ಸಭೆ ನಡೆಯಲಿದೆ.

error: Content is protected !!