ಕೋರ್ಟ್‍ನಲ್ಲಿ ಪೇದೆಯನ್ನೇ ತಳ್ಳಿ ತಲೆಮರೆಸಿಕೊಂಡಿದ್ದ ಆರೋಪಿ ಹಾಸನದಲ್ಲಿ ಅರೆಸ್ಟ್

 

 

ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪೊಲೀಸ್ ಪೇದೆಯನ್ನೇ ತಳ್ಳಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ.

ಸರ್ಕಾರಿ ಶಾಲೆ ಶಿಕ್ಷಕ ಪುರುಷೋತ್ತಮ್ ಅವರನ್ನು ಬಂಧಿಸಲಾಗಿದೆ. ಇವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ, ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆಂದು ಕರೆದುಕೊಂಡು ಹೋಗಿದ್ದಾಗ ಪುರುಷೋತ್ತಮ್ ಅವರು ಪರಾರಿಯಾಗಿದ್ದರು.

ಸಮೂಃ ಸಂಪನ್ಮೂಲ ಶಿಕ್ಷಕ ಪ್ರಭಾಕರ್ ಎಂಬುವವರು ಪುರುಷೋತ್ತಮ್ ಅವರ ವಿರುದ್ಧ ದೂರು ನೀಡಿದ್ದರು. ಕೋಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

error: Content is protected !!