ಹಿಟ್ ಆಂಡ್ ರನ್ ಪ್ರಕರಣದ ಆರೋಪಿ ಅರೆಸ್ಟ್

 

 

ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನ ಬಲೆಗಾರು ಗ್ರಾಮದ ಸಮೀಪ ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಪೊಲೀಸರು ಗುರುವಾರ ಬಂಧಿಸಲಾಗಿದೆ.

ತಮಿಳುನಾಡಿನ ಹೊಸೂರು ನಿವಾಸಿ ಸುರೇಶ್ ಬಾಬು(42) ಎಂಬಾತನ್ನು ಬಂಧಿಸಲಾಗಿದೆ. ಡಿಸೆಂಬರ್ 3ರಂದು ಸಂಜೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಬೈಕಿಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಟ್ಯಾಂಕ್ ಮೊಹಲ್ಲಾ ನಿವಾಸಿ ಮಹಾದೇವ್ (34) ಮೃತಪಟ್ಟಿದ್ದ. ಬೈಕ್ ಹಿಂಬದಿ ಕುಳಿತಿದ್ದ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದ ಗಿರೀಶ್ ಎಂಬುವವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು.

ಪ್ರಕರಣ ದಾಖಲಿಸಿಕೊಂಡಿದ್ದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಪಿಐ ನೇತೃತ್ವದಲ್ಲಿ ತನಿಖೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

error: Content is protected !!