ಶಿಕ್ಷಕಿಯ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿ

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಮಿಳಘಟ್ಟದಲ್ಲಿರುವ ಶಿಕ್ಷಕಿಯೊಬ್ಬರ ಮನೆಯಲ್ಲಿ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಕೀಗಡಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕಿ ರೇಖಾ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.

READ | ಅಡಿಕೆ ವ್ಯಾಪಾರಿಯಿಂದಲೇ ಅಡಿಕೆ ಕಳ್ಳತನ

ಅಂದಾಜು 75,000 ಮೌಲ್ಯದ ಕಳ್ಳತನ ಮಾಡಲಾಗಿದೆ. ರೇಖಾ ಅವರು ಕೆಲಸಕ್ಕೆ ಹೋಗಿದ್ದು ವಾಪಸ್ ಬಂದು ನೋಡಿದಾಗ ಚಿಲಕ ಮುರಿದು ಕಳ್ಳತನ ಮಾಡಲಾಗಿತ್ತು. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!