ಈಶ್ವರಪ್ಪ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್, `ಬಿಜೆಪಿಯವರಿಗೆ ಸಂವಿಧಾನ ಪಾಠ ಮಾಡುವೆ’

 

 

ಸುದ್ದಿ ಕಣಜ.ಕಾಂ
ಬೆಂಗಳೂರು/ಶಿವಮೊಗ್ಗ: ‘ಆರ್.ಎಸ್.ಎಸ್. ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

Siddaramayya tweet on RSS‘ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು. ಆರ್.ಎಸ್.ಎಸ್. ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡ್ತೇನೆ’ ಎಂದು ಪಂಥಹ್ವಾನ್ ನೀಡಿದ್ದಾರೆ.
ಇತ್ತೀಚೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ಬಗ್ಗೆ ತಿಳಿವಳಿಕೆ ಇಲ್ಲ. ಹೀಗಾಗಿ, ಹಗುರವಾಗಿ ಮಾತನಾಡಿದ್ದಾರೆ. ಟೀಕಿಸುವ ಮುನ್ನ ಡಿ.ಕೆ.ಶಿ, ಸಿದ್ದರಾಮಯ್ಯ ಮತ್ತು ಹರಿಪ್ರಸಾದ್ ಅವರು ಆರ್.ಎಸ್.ಎಸ್. ಬಗ್ಗೆ ತಿಳಿದುಕೊಳ್ಳಲಿ ಎಂದು ಹೇಳಿದ್ದರು. ಅದಕ್ಕೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.

ಸಚಿವ ಕೆ.ಎಸ್.ಈಶ್ವರಪ್ಪ ಮಾಡಿದ್ದ ಆರೋಪವೇನು? ಇಲ್ಲಿ ಕ್ಲಿಕ್ ಮಾಡಿ:  https://www.suddikanaja.com/2020/11/17/ishwarappas-comments-on-congress-leaders/

Leave a Reply

Your email address will not be published. Required fields are marked *

error: Content is protected !!