ಸುದ್ದಿ ಕಣಜ.ಕಾಂ | TALUK | CRIME NEWS
ಹೊಸನಗರ: ಮಾರಿಗುಡ್ಡದ ನಿವಾಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.
ಶಿಕ್ಷಕಿ ಮಂಜುಳಾ ಅವರ ಪುತ್ರಿ ಶಮಾ (16) ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಐದು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಈಕೆ ಶಾಲೆಗೂ ಹೋಗುತ್ತಿರಲಿಲ್ಲ. ಮನೆಯಲ್ಲಿ ಆರೈಕೆ ಮಾಡಲಾಗುತಿತ್ತು.
ಕಾಯಿಲೆಯಿಂದ ಮಾನಸಿಕವಾಗಿ ನೊಂದಿದ್ದ ಬಾಲಕಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.