ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಜಿಲ್ಲೆಯ ಉಸ್ತುವಾರಿ ಸಚಿವರನ್ನು ಬದಲಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿರ್ಧರಿಸಿದ್ದಾರೆ.
ಸಚಿವ ಕೆ.ಸಿ.ನಾರಾಯಣಗೌಡ ಅವರನ್ನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಹೊಣೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಚಿಕ್ಕಮಗಳೂರಿನ ಜವಾಬ್ದಾರಿಯನ್ನು ನೀಡಿದರೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತುಮಕೂರಿನ ಹೊಣೆಗಾರಿಗೆ ನೀಡಲಾಗಿದೆ.
ಬಿಜೆಪಿ ಅಧಿಕಾರ ಅವಧಿಯಲ್ಲಿ ಇದೇ ಮೊದಲು ಬೇರೆಯವರಿಗೆ ಹೊಣೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದೇ ಮೊದಲ ಸಲ ಹೊರ ಜಿಲ್ಲೆಯವರಿಗೆ ಜಿಲ್ಲೆಯ ಹೊಣೆಗಾರಿಕೆಯನ್ನು ನೀಡಲಾಗಿದೆ. ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ, ಈಶ್ವರಪ್ಪ ಜವಾಬ್ದಾರಿ ಹೊತ್ತಿದ್ದರು.