ಸುದ್ದಿ ಕಣಜ.ಕಾಂ | DISTRICT | SELF DEFENCE
ಶಿವಮೊಗ್ಗ: ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ‘ಓಬವ್ವ ಆತ್ಮ ರಕ್ಷಣಾ ಕಲೆ’ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ನೆರವೇರಿಸುವರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ.