ಶಿವಮೊಗ್ಗ ಉದ್ವಿಗ್ನ ಸ್ಥಿತಿಯ ಬಗ್ಗೆ ಉಸ್ತುವಾರಿ ಸಚಿವರೇನು ಹೇಳಿದ್ದಾರೆ?

 

 

ಸುದ್ದಿ ಕಣಜ.ಕಾಂ | DISTRICT | HIJAB-SAFFRON CONTROVERSY 
ಶಿವಮೊಗ್ಗ: ಹಿಜಾಬ್- ಕೇಸರಿ ಶಾಲು ವಿವಾದ ಬಗ್ಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಪ್ರಕಟಣೆಯನ್ನು ಹೊರಡಿಸಿದ್ದಾರೆ.

READ | ಶಿವಮೊಗ್ಗದಲ್ಲಿ 144 ಜಾರಿ, ಎಷ್ಟು ಜನ ದಿನ ಇರಲಿದೆ ನಿಷೇಧಾಜ್ಞೆ

READ | ಹಿಜಾಬ್ ವಿವಾದ, ಶಿವಮೊಗ್ಗದಲ್ಲಿ ಲಾಠಿ ಚಾರ್ಜ್, ಕಲ್ಲು ತೂರಾಟ, ಉದ್ವಿಗ್ನ ಸ್ಥಿತಿ, ಸ್ಥಳದಲ್ಲೇ ಬೀಡು ಬಿಟ್ಟ ಡಿಸಿ, ಎಸ್‍ಪಿ

ಪ್ರಕಟಣೆಯಲ್ಲಿ ಏನಿದೆ?
ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ನಡೆದ ಘಟನೆ ಸಂಬಂಧ ಜಿಲ್ಲಾಡಳಿತದ ಜೊತೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. ಕಾನೂನಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ. ಡಿಸಿ, ಎಸ್‍ಪಿ ಹಾಗೂ ಸ್ಥಳೀಯ ಶಾಸಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

error: Content is protected !!