ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬರುವ ವರ್ಷ ಮಾರ್ಚ್ ಅಂತ್ಯಕ್ಕೆ ಎಲ್ಲ 272 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ಘಟಕ ಕಾರ್ಯಾರಂಭ ಶುರುವಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಹೇಳಿದರು.
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಸಮಸ್ಯೆಗಳ ಬಗ್ಗೆ ಸಮಾಲೋಚನೆ ಸಭೆಯಲ್ಲಿ ಮಾಹಿತಿ ನೀಡಿದರು.
ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ಘಟಕ ಆರಂಭಿಸುವ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೇ 116 ಗ್ರಾಪಂಗಳಲ್ಲಿ ಘಟಕ ಸ್ಥಾಪನೆಗೆ ಭೂಮಿ ಗುರುತಿಸಲಾಗಿದೆ. 35 ಗ್ರಾಪಂಗಳಿಗೆ ಈಗಾಗಲೇ ಘಟಕ ಸ್ಥಾಪನೆಗೆ 20 ಲಕ್ಷ ರೂ. ಬಿಡುಗಡೆಯಾಗಿದೆ. ಇವುಗಳ ಪೈಕಿ 23 ಪಂಚಾಯಿತಿಗಳಲ್ಲಿ ಸಂಪೂರ್ಣ ಕಸ ವಿಲೇವಾರಿ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದರು.