26ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಪ್ರತಿಭಟನೆ, ಕಾರಣವೇನು?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು)ಯು ನವೆಂಬರ್ 26ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ. ಅದಕ್ಕೆ ಬೆಂಬಲಿಸಿ ಶಿವಮೊಗ್ಗಲ್ಲಿಯೂ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಲಾಗುವುದು ಎಂದು ಜೆಸಿಟಿಯು ಜಿಲ್ಲಾ ಸಂಚಾಲಕ ಎಂ. ನಾರಾಯಣ್ ಹೇಳಿದರು.
ಅಂದು ಬೆಳಗ್ಗೆ 11ಕ್ಕೆ ನಗರದ ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮಾಡಲಾಗುವುದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಯಾರ ಬೆಂಬಲ: ಮುಷ್ಕರಕ್ಕೆ ಅಖಿಲ ಭಾರತ ಸಂಘಟನೆಗಳು, ಕಾರ್ಮಿಕರು, ನೌಕರರು, ಅಸಂಘಟಿತ ಕ್ಷೇತ್ರದ ಕಾರ್ಮಿಕರು, ಬೀದಿ ಬದಿ ವ್ಯಾಪಾರಸ್ಥರು, ಆಟೋ, ಟ್ಯಾಕ್ಷಿ, ಸಾರಿಗೆ ನೌಕರರು, ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತರು, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ ಸೇರಿದಂತೆ ಇತರೆ ಸಂಘಟನೆಗಳು ಬೆಂಬಲ ನೀಡಿವೆ.
ಪ್ರತಿಭಟನೆಗೇನು ಕಾರಣ?

  • ಕೇಂದ್ರ ಸರ್ಕಾರ ಕಾರ್ಮಿಕ ಸಂಘಟಗಳ ಜೊತೆ ಚರ್ಚಿಸದೇ ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ಕಾರ್ಮಿಕ ಸಂಹಿತೆಗಳನ್ನು ಅಂಗೀಕರಿಸಿದೆ. ಇದರಿಂದ ಕಾರ್ಮಿಕರಿಗೆ ಅನ್ಯಾಯವಾಗಲಿದೆ.
  • ರೈತ ವಿರೋಧಿ ಕಾನೂನುಗಳನ್ನು ವಾಪಾಸ್ ಪಡೆಯಬೇಕು, ಆದಾಯ ತೆರಿಗೆ ರಹಿತ ಕುಟುಂಬಗಳಿಗೆ 7,500 ರೂ.ಪಾವತಿಸಬೇಕು.
  • ಎಲ್ಲ ಅಗತ್ಯ ಇರುವವರಿಗೆ ತಿಂಗಳಿಗೆ 10 ಕೆಜಿ ಉಚಿತ ಪಡಿತರ ನೀಡಬೇಕು.
  • ಸಾರ್ವಜನಿಕ ವಲಯ ಸೇವಾ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು.

Leave a Reply

Your email address will not be published. Required fields are marked *

error: Content is protected !!