ಸುದ್ದಿ ಕಣಜ.ಕಾಂ | TALUK | CRIME NEWS
ಶಿಕಾರಿಪುರ: ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ಮೂರು ಎಕರೆ ಭೂಸ್ವಾಧೀನ ಮಾಡಿಕೊಂಡಿದ್ದರಿಂದ ಮನನೊಂದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ನಿವಾಸಿ ಅರುಣ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ತೋಟದಲ್ಲಿ ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
READ | ನಾಳೆಯಿಂದ ಎರಡು ದಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಕ್ಲೋಸ್, ನಾಲ್ಕು ಪರ್ಯಾಯ ಮಾರ್ಗದ ವ್ಯವಸ್ಥೆ
ಈಗಾಗಲೇ ರೈಲ್ವೆ ಯೋಜನೆಗೆ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಜಮೀನು ಸ್ವಾಧೀನ ಪಡಿಸಿಕೊಂಡಿದ್ದು, ಪರಿಹಾರ ಕಾರ್ಯಕ್ಕೆ ಕ್ರಮಕೈಗೊಳ್ಳಲಾಗಿದೆ.
ಶಿಕಾರಿಪುರ ತಾಲೂಕಿನ ಎಳೆನೀರುಕೊಪ್ಪ ಗ್ರಾಮದಲ್ಲಿ ಅರುಣ್ ಅವರ ತಂದೆ ತಿಮ್ಮಾ ನಾಯ್ಕ್ ಅವರಿಗೆ ಸೇರಿದ ಮೂರು ಎಕರೆ ಜಮೀನು ಇದೆ. ಇದನ್ನು ರೈಲ್ವೆ ಕಾಮಗಾರಿಗಾಗಿ ಸ್ವಾಧೀನ ಪಡಿಸಿಕೊಂಡಿದ್ದು, ಪ್ರತಿ ಎಕರೆಗೆ 5 ಲಕ್ಷ ರೂಪಾಯಿ ಪರಿಹಾರ ನಿಗದಿಪಡಿಸಿ ನೋಟಿಸ್ ಜಾರಿಗೊಳಿಸಲಾಗಿತ್ತು.
ಕಾಮಗಾರಿ ಸ್ಥಳದಲ್ಲೇ ವಿರೋಧ ವ್ಯಕ್ತಪಡಿಸಿದ್ದ ರೈತ
ಅರುಣ್ ನಾಯ್ಕ್ ಅವರು ರೈಲ್ವೆ ಕಾಮಗಾರಿ ಸ್ಥಳದಲ್ಲೇ ಪರಿಹಾರದ ಮೊತ್ತ ತುಂಬ ಕಡಿಮೆಯಾಗುತ್ತದೆ ಎಂದು ವಿರೋಧ ವ್ಯಕ್ತಪಡಿಸಿದ್ದ. ಇದರಿಂದ ರೈತರಿಗೆ ಅನ್ಯಾಯವಾಗುತ್ತದೆ ಎಂದು ತಿಳಿಸಿದ್ದರು. ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.suddikanaja.com/2020/11/04/ranibennur-smg-railwa/